ತೀರ್ಥಹಳ್ಳಿ ,ಸಾಗರ ತಾಲ್ಲೂಕಿನ ವಿವಿಧೆಡೆಕರೋನಾ ಭಯ ಗಿಂತಲೂ ಮಂಗನ ಕಾಯಿಲೆ ಭಯ ಹೆಚ್ಚಾಗಿದೆ ,ಕಾರಣವೇನು ಗೊತ್ತಾ ?
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಗಿಂತಲೂ ಮಂಗನ ಕಾಯಿಲೆ ಭಯ ಹೆಚ್ಚು, ಕಾರಣವೇನು? ಈವರೆಗೆ ಎಷ್ಟು ಪಾಸಿಟಿವ್ ಬಂದಿದೆ? ಜಗತ್ತಿನಾದ್ಯಂತ ಕರೋನ ಆತಂಕವಿದ್ದರೆ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಭೀತಿ ಎದುರಾಗಿದೆ. ತೀರ್ಥಹಳ್ಳಿ, ಸಾಗರ ತಾಲೂಕಿನ ವಿವಿಧೆಡೆ ಮಂಗನ ಕಾಯಿಲೆ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ಕೆಲವು ಕಡೆಗೆ ಜನರು ಕಾಡಿಗೆ ಹೋಗುವುದನ್ನೆ ನಿರ್ಬಂಧಿಸಲಾಗಿದೆ. ತೀರ್ಥಹಳ್ಳಿಯಲ್ಲಿ 111 ಸೋಂಕಿತರು ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನಲ್ಲಿ ಕೆಎಫ್’ಡಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಇನ್ನು ಸಾಗರದಲ್ಲಿ 27 ಮತ್ತು ಹೊಸನಗರ ತಾಲೂಕಿನಲ್ಲಿ ಒಬ್ಬರು ಸೋಂಕು ತಗುಲಿದೆ. ಕೆಎಫ್’ಡಿಗೆ ಐವರು ಸಾವು ಮಂಗನ ಕಾಯಿಲೆಗೆ ಈ ವರ್ಷ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನಲ್ಲಿ ಐವರು ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕನ್ನಂಗಿ, ಬೆಟ್ಟಬಸವಾನಿ, ಕೋಣಂದೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ಸಾಗರದ ತುಮರಿ ಮತ್ತು ಅರಳಗೋಡು ಪಿಹೆಚ್’ಸಿ ವ್ಯಾಪ್ತಿಯಲ್ಲಿ ತಲಾ ಒಬ್ಬರು ಕೆಎಫ್’ಡಿಗೆ ಅಸುನೀಗಿದ್ದಾರೆ. ದಯವಿಟ್ಟು ಕಾಡಿಗೆ ಹೋಗಬೇಡಿ ಕೆಎಫ್’ಡಿ ಹರಡುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ 31 ಪ್ರದೇಶಗಳನ್ನು ಸೂಕ್ಷ್ಮ ಪ್ರದ...

Comments
Post a Comment